ಶುಕ್ರವಾರ, ಏಪ್ರಿಲ್ 14, 2017

ಅರಸೀಕೆರೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 126ನೇ ಜನ್ಮದಿನಾಚರಣೆ ಹಾಗೂ ಬಾಬು ಜಗಜೀವನರಾಮ್ ರವರ 110ನೇ ಜನ್ಮದಿನಾಚರಣೆಯ ಅಂಗವಾಗಿ ಅರಸೀಕೆರೆ ಪಟ್ಟಣದ ಶ್ರೀ ವೆಂಕಟೇಶ್ವರ ಕಲಾಭವನದಲ್ಲಿ ನಡೆದ ಕಾರ್ಯಕ್ರಮವನ್ನು ನಗರಸಭಾ ಅಧ್ಯಕ್ಷ ಸಮೀವುಲ್ಲಾ ರವರು ದೀಪಬೆಳಗಿಸಿ ಉದ್ಘಾಟಿಸಿದರು.  ಶಾಸಕರಾದ ಕೆ.ಎಂ.ಶಿವಲಿಂಗೇಗೌಡರು, ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಮಂಜುಳಾಬಾಯಿ, ನಗರ ಪ್ರಾಧಿಕಾರದ ಅಧ್ಯಕ್ಷರಾದ ಗಂಜಿಗೆರೆ ಚಂದ್ರಶೇಖರ್, ಜಿಲ್ಲಾ ಪಂಚಾಯತಿ ಸದಸ್ಯರಾದ ಪಟೇಲ್ ಶಿವಪ್ಪ, ಲೀಲಾ ಧರ್ಮಶೇಖರ, ವಿವಿಧ ಸಮಾಜದ ಮುಖಂಡರುಗಳು, ಸರ್ಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು. ಅರಸೀಕೆರೆ ಪಟ್ಟಣದ ಹಾಸನ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿದರು.  ಜನ್ಮದಿನಾಚರಣೆಯ ಅಂಗವಾಗಿ ಇಬ್ಬರು ಮಹನೀಯರ ಭಾವಚಿತ್ರವನ್ನೊಳಗೊಂಡ ರಥದಲ್ಲಿ ಅರಸೀಕೆರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ಜರುಗಿತು.

(ಕಾರ್ಯಕ್ರಮದ ಚಿತ್ರ / ಮಾಹಿತಿ : ಲಕ್ಷ್ಮೀಶ್ ಬಾಬು)
(ಮೆರವಣಿಗೆಯ ಚಿತ್ರಗಳು : ಟಿ.ಸಿ.ಪೂರ್ಣಚಂದ್ರ)

Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....