ಗುರುವಾರ, ನವೆಂಬರ್ 8, 2018

ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವ ಅರಸೀಕೆರೆ

"ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವ ಅರಸೀಕೆರೆ"


ನಾಳೆ (09-11-2018) ಶುಕ್ರವಾರ ಜರುಗಲಿರುವ ಅರಸೀಕೆರೆ ಶ್ರೀ ಪ್ರಸನ್ನ ಗಣಪತಿಯವರ ವಿಸರ್ಜನಾ ಮಹೋತ್ಸವಕ್ಕೆ ಅರಸೀಕೆರೆ ನಗರವು ವಿದ್ಯುತ್ ದೀಪಾಲಂಕಾರಗಳಿಂದ ಸಿಂಗಾರಗೊಂಡಿದೆ.
ನಗರದ ಬಿ.ಹೆಚ್ ರಸ್ತೆಯಲ್ಲಿ ಎಪಿಎಂಸಿ ಗೇಟಿನ ಮುಂಭಾಗದಿಂದ ಕಂತೇನಹಳ್ಳಿ ಕೆರೆಯ ವರೆಗೂ ಬಣ್ಣಬಣ್ಣದ ದೀಪಗಳಿಂದ ಅಲಂಕರಿಸಲಾಗಿದೆ. ದೀಪಾವಳಿಯ ಈ ಸಂದರ್ಭದಲ್ಲಿ, ಅರಸೀಕೆರೆ ನಗರವು ಅಕ್ಷರಶಃ ದೀಪಗಳಿಂದ ಕಂಗೊಳಿಸುತ್ತಿದೆ.
ಶ್ರೀ ಪ್ರಸನ್ನ ಗಣಪತಿಯವರ ಸಾಂಸ್ಕೃತಿಕ ಕಾರ್ಯಕ್ರಮಗಳ ಕೊನೆಯ ದಿನವಾದ ಇಂದು ಸಂಜೆ ಶ್ರೀಮತಿ ಮಾಲಿನಿ ರವರಿಂದ ಹರಿಕಥೆಯನ್ನು ಏರ್ಪಡಿಸಲಾಗಿತ್ತು.
10-11-2018, ಶನಿವಾರದಂದು ರಾತ್ರಿ ಅರಸೀಕೆರೆ ಕಂತೇನಹಳ್ಳಿ ಕೆರೆಯಲ್ಲಿ ಶ್ರೀಯವರನ್ನು ವಿಸರ್ಜಿಸಲಾಗುವುದು.Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....