ಗುರುವಾರ, ಡಿಸೆಂಬರ್ 20, 2018

ಅರಸೀಕೆರೆಯಲ್ಲಿ ಹನುಮ ಜಯಂತಿ ಆಚರಣೆ

ಹನುಮ ಜಯಂತಿ

ಅರಸೀಕೆರೆ ನಗರದ ವಾಚನಾಲಯ ರಸ್ತೆಯಲ್ಲಿರುವ ಶ್ರೀ ಪ್ರಾಚೀನ ಆಂಜನೇಯ ಸ್ವಾಮಿಯವರ ದೇವಸ್ಥಾನದಲ್ಲಿ ಗುರುವಾರದಂದು ಹನುಮ ಜಯಂತಿಯ ಅಂಗವಾಗಿ ಪ್ರಾಥಃಕಾಲ ಶ್ರೀಯವರಿಗೆ ಅಭಿಷೇಕ ಮತ್ತು ಕುಂಕುಮಾರ್ಚನೆ ಜರುಗಿತು.  ಸಂಜೆ ಆಂಜನೇಯಸ್ವಾಮಿಗೆ ವಿಶೇಷ ಅಲಂಕರ ಹಾಗೂ ಭಕ್ತಾಧಿಗಳಿಗೆ ತೀರ್ಥಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.

ಭಕ್ತರಿಗೆ ನೀಡುವ ಪ್ರಸಾದದ ಗುಣಮಟ್ಟವನ್ನು ಅರಸೀಕೆರೆ ತಾಲ್ಲೂಕು ವೈದ್ಯಾಧಿಕಾರಿಗಳ ನೇತೃತ್ವದ ತಂಡ ಪರಿಶೀಲನೆ ನಡೆಸಿತು.  ಅರಸೀಕೆರೆ ತಾಲ್ಲೂಕು ದಂಡಾಧಿಕಾರಿಗಳು ಹಾಗೂ ಮುಜರಾಯಿ ಅಧಿಕಾರಿಗಳಾದ ತಹಶೀಲ್ದಾರ್ ಶ್ರೀ ಎನ್.ವಿ.ನಟೇಶ್ ರವರು ಹನುಮ ಜಯಂತಿ ಸಿದ್ಧತೆಗಳನ್ನು ಪರಿಶೀಲಿಸಿದರು.  ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರವಿಶಂಕರನ್ ಮತ್ತು ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.


Share:

ಅರಸೀಕೆರೆ ಕಾಫಿ ಡೇ ಬಳಿ ರಸ್ತೆ ಅಪಘಾತ - 1 ಸಾವು

ಅರಸೀಕೆರೆ ತಾಲ್ಲೂಕು ಕಸಬಾ ಹೋಬಳಿ ಸೈದರಹಳ್ಳಿ ಗೇಟ್ ಕಾಫಿ ಡೇ ಸಮೀಪ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಇಂದು ಸಂಜೆ 4 ಗಂಟೆಯ ಸಮಯದಲ್ಲಿ,  ಬಾಣಾವರದಿಂದ ಅರಸೀಕೆರೆಗೆ ಬರುತ್ತಿದ್ದ ಮಾರುತಿ ಒಮಿನಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸುನಿಲ್ (28 ವರ್ಷ) ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ.  ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿಸಲಾಗಿದೆ.

ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

(ಚಿತ್ರ ಮತ್ತು ಮಾಹಿತಿ : ಪೊಲೀಸ್ ಇಲಾಖೆ)
Share:

ಮಂಗಳವಾರ, ಡಿಸೆಂಬರ್ 18, 2018

ಅರಸೀಕೆರೆ ಮಾಲೇಕಲ್ಲು ತಿರುಪತಿಯಲ್ಲಿ ವೈಭವದ ವೈಕುಂಠ ಏಕಾದಶಿ

ವೈಕುಂಠ ಏಕಾದಶಿ

ಅರಸೀಕೆರೆ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ದೇವಸ್ಥಾನದಲ್ಲಿ ಇಂದು ವೈಕುಂಠ ಏಕಾದಶಿಯ ಪ್ರಯುಕ್ತ ಶ್ರೀ ಗೋವಿಂದರಾಜ ಸ್ವಾಮಿಯವರಿಗೆ ವಾಮನಾವತಾರದ ಅಲಂಕಾರ, ಮಹಾಲಕ್ಷ್ಮಿ ಅಮ್ಮನವರಿಗೆ ವಿಶೇಷ ಅಲಂಕಾರ, ವೈಕುಂಠ ದ್ವಾರದ ಮಂಟಪದಲ್ಲಿ ಶ್ರೀಯವರ ಉತ್ಸವ ಮೂರ್ತಿಗೆ ವೈಕುಂಠ ನಾರಾಯಣ ಅಲಂಕಾರ ಮಾಡಲಾಗಿತ್ತು. ಶ್ರೀ ಆಂಜನೇಯ ಸ್ವಾಮಿಗೆ ಹಾಗೂ  ಮಾಲೇಕಲ್ಲು ತಿರುಪತಿ ಬೆಟ್ಟದ ಮೇಲೆ ನೆಲೆಸಿರುವ ಶ್ರೀನಿವಾಸ ಸ್ವಾಮಿ ಮತ್ತು ಪದ್ಮಾವತಿ ಅಮ್ಮನವರಿಗೆ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆ ದೇವಸ್ಥಾನದಲ್ಲಿ  ಪ್ರಾತಃಕಾಲ ಶ್ರೀಯವರಿಗೆ ಹಾಗೂ ಅಮ್ಮನವರಿಗೆ ಅಭಿಷೇಕ ಹಾಗೂ ಪ್ರಾಕಾರದಲ್ಲಿ ಶ್ರೀಯವರ ಉತ್ಸವ ಜರುಗಿತು. ಸಾವಿರಾರು ಭಕ್ತರು ಸ್ವಾಮಿಯ ದರ್ಶನ ಪಡೆದುಕೊಂಡರು.  ಅರಸೀಕೆರೆಯ ವಿವಿಧ ಸಂಘ ಸಂಸ್ಥೆಗಳಿಂದ ದೇವಸ್ಥಾನದ ಆವರಣದಲ್ಲಿ ಭಕ್ತಿಗೀತೆ, ದೇವರನಾಮ, ಭಜನೆ ಕಾರ್ಯಕ್ರಮ ಜರುಗಿತು.

ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕುಟುಂಬದವರಿಂದ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಹನೂರು ತಾಲ್ಲೂಕಿನ ಕಿಚ್ಚುಗುತ್ತಿ ಮಾರಮ್ಮ ವಿಷಾಹಾರ ದುರಂತ ಪ್ರಕರಣದ ಹಿನ್ನೆಲೆಯಲ್ಲಿ, ಅರಸೀಕೆರೆ ಮಾಲೇಕಲ್ಲು ತಿರುಪತಿಯಲ್ಲಿ ಇಂದು ವೈಕುಂಠ ಏಕಾದಶಿ ಪ್ರಯುಕ್ತ ಜರುಗುತ್ತಿರುವ ಅನ್ನಸಂತರ್ಪಣೆ ಪ್ರಾರಂಭಕ್ಕೆ ಮುಂಚಿತವಾಗಿ CFTRI ಸಿಬ್ಬಂದಿಗಳು ಆಹಾರ ಗುಣಮಟ್ಟ ಪರಿಶೀಲಿಸಿ, ಊಟದ ಸ್ಯಾಂಪಲ್ ಸಂಗ್ರಹಿಸಿದರು. ನಂತರ ಭಕ್ತಾಧಿಗಳಿಗೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.Share:

ಗುರುವಾರ, ಡಿಸೆಂಬರ್ 13, 2018

ವೈಕುಂಠ ಏಕಾದಶಿ ಕಾರ್ಯಕ್ರಮಕ್ಕೆ ಆಹ್ವಾನ

"ವೈಕುಂಠ ಏಕಾದಶಿ"

ದಿನಾಂಕ 18-12-2018, ಮಂಗಳವಾರದಂದು "ವೈಕುಂಠ ಏಕಾದಶಿ" ಪ್ರಯುಕ್ತ ಅರಸೀಕೆರೆ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ದೇವಸ್ಥಾನದಲ್ಲಿ ಪ್ರಾತಃಕಾಲ ಶ್ರೀಯವರಿಗೆ ಹಾಗೂ ಅಮ್ಮನವರಿಗೆ ಅಭಿಷೇಕ, ನಂತರ ವಿಶೇಷ ಅಲಂಕಾರ ಹಾಗೂ ತೀರ್ಥಪ್ರಸಾದ ವಿನಿಯೋಗವಿರುತ್ತದೆ.

ಬೆಳಿಗ್ಗೆ 7.30 ರಿಂದ ಸಂಜೆ 6.30 ರ ವರೆಗೆ ದೇವಸ್ಥಾನದ ವೈಕುಂಠ ದ್ವಾರದಲ್ಲಿ ನಿರ್ಮಿಸಿರುವ ಮಂಟಪದಲ್ಲಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶ್ರೀಯವರಿಗೆ ವಿಶೇಷ ಅಲಂಕಾರವನ್ನು ಏರ್ಪಡಿಸಲಾಗುವುದು.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ರವರ ವತಿಯಿಂದ ದೇವಸ್ಥಾನಕ್ಕೆ ಹೂವಿನ ವಿಶೇಷ ಅಲಂಕಾರ ಹಾಗೂ ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.  ಅನ್ನ ಸಂತರ್ಪಣೆಗಾಗಿ ತಿರುಪತಿಯಲ್ಲಿರುವ ಆರ್ಯವೈಶ್ಯ ಕಲ್ಯಾಣ ಮಂದಿರವನ್ನು ಮಂಡಲಿಯ ವತಿಯಿಂದ ಉಚಿತವಾಗಿ ನೀಡಲಾಗಿರುತ್ತದೆ.

ಬೆಳಿಗ್ಗೆ 10 ಗಂಟೆಯಿಂದ ಸಂಜೆ 6.30ರ ವರೆಗೆ ಅರಸೀಕೆರೆಯ ವಿವಿಧ ಸಂಘ ಸಂಸ್ಥೆಗಳಿಂದ ದೇವಸ್ಥಾನದ ಆವರಣದಲ್ಲಿ ಭಕ್ತಿಗೀತೆ, ದೇವರನಾಮ, ಭಜನೆ ಕಾರ್ಯಕ್ರಮ ಜರುಗಲಿದೆ.

ಅರಸೀಕೆರೆ ಬಸ್ ನಿಲ್ದಾಣದಿಂದ ಬೆಳಿಗ್ಗೆ 7 ಗಂಟೆಯಿಂದ ಸಂಜೆ 8 ಗಂಟೆಯವರೆಗೆ ಮಾಲೇಕಲ್ಲು ತಿರುಪತಿಗೆ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳ ಸಂಚಾರ ವ್ಯವಸ್ಥೆ ಇರುತ್ತದೆ.


Share:

ಬುಧವಾರ, ಡಿಸೆಂಬರ್ 12, 2018

ಅರಸೀಕೆರೆ ಬಳಿ ರಸ್ತೆ ಅಪಘಾತ 1 ಸಾವು

ಅರಸೀಕೆರೆ ಬಳಿ ರಸ್ತೆ ಅಪಘಾತ 1 ಸಾವು

ಅರಸೀಕೆರೆ ತಾಲ್ಲೂಕು ಕಸಬಾ ಹೋಬಳಿ ಹೊಸಕಲ್ಲನಾಯ್ಕನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಇಂದು (12-12-2018) ಮುಂಜಾನೆ ಸುಮಾರು 7.30 ಗಂಟೆಯ ಸಮಯದಲ್ಲಿ ಫೋರ್ಡ್ ಐಕಾನ್ ಕಾರು ಮತ್ತು ಮಾರುತಿ ವ್ಯಾಗನಾರ್ ಕಾರಿನ ನಡುವೆ  ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ  ಒಬ್ಬರು ಮೃತಪಟ್ಟಿದ್ದು, ಎರಡು ಕಾರಿನಲ್ಲಿದ್ದ ಐದು ಜನರಿಗೆ ಗಾಯಗಳಾಗಿರುತ್ತದೆ.

ಶಿವಮೊಗ್ಗದಿಂದ ಚನ್ನರಾಯಪಟ್ಟಣಕ್ಕೆ ತೆರಳುತ್ತಿದ್ದ ಫೋರ್ಡ್ ಐಕಾನ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಂಜುನಾಥಯ್ಯ (75) ಎಂಬುವರು ಅಪಘಾತದಲ್ಲಿ ಮೃತಪಟ್ಟಿರುತ್ತಾರೆ.  ಅವರ ಪತ್ನಿ ಜಯಶ್ರೀ (68) ರವರಿಗೆ, ವಾಹನ ಚಾಲನೆ ಮಾಡುತ್ತಿದ್ದ ಪುತ್ರ ಕಾರ್ತಿಕ್ (41) ರವರಿಗೆ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕಳಿಸಿಕೊಡಲಾಗಿದೆ.

ನಿಟ್ಟೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಮಾರುತಿ ವ್ಯಾಗನಾರ್ ಕಾರಿನಲ್ಲಿದ್ದ ರವಿ ಚೌಹಾನ್ (30) ಗೋಪಾಲ್ (32) ಮತ್ತು ಗುರು (28) ಇವರುಗಳಿಗೆ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ.

ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

(ಚಿತ್ರ ಮಾಹಿತಿ : ಪೊಲೀಸ್ ಇಲಾಖೆ)

Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....